ಅಲಹಾಬಾದ್: ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದೆ.
ಜ್ಞಾನವ್ಯಾಪಿ ಪ್ರಕರಣದಂತೆಯೇ ಹಿಂದೂ-ಮುಸ್ಲಿಂ ಸಮುದಾಯಗಳ ತಿಕ್ಕಾಟಕ್ಕೆ ಕಾರಣವಾಗಿರುವ ಮತ್ತೊಂದು ಪುಣ್ಯಕ್ಷೇತ್ರ ಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಅಲಹಾಬಾದ್ ಹೈಕೋರ್ಟ್ ವಿವಾದಿತ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, ‘ತೀರ್ಪು ಬರುವುದು ಒಳ್ಳೆಯದು. ಸಮೀಕ್ಷೆ ಮುಖ್ಯವಾಗಿದೆ. ಸಮೀಕ್ಷೆಯು ಸತ್ಯಗಳನ್ನು ಸ್ಪಷ್ಟವಾಗಿ ತೋರಿಸುತ್ತದೆ’ ಎಂದು ಹೇಳಿದರು.