ದಾಂಡೇಲಿ: ಮಾರುತಿನಗರದಲ್ಲಿರುವ ಶ್ರೀಜಗದಂಬಾ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳ್ಳತನವಾಗಿರುವ ಘಟನೆ ಭಾನುವಾರ ನಸುಕಿನ ವೇಳೆಯಲ್ಲಿ ನಡೆದಿದೆ.
ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ದೇವಸ್ಥಾನದ ಒಳಗಡೆ ಇರುವ ಎರಡು ಕಾಣಿಕೆ ಡಬ್ಬಿಗಳನ್ನು ಹೊರತಂದು ದೇವಸ್ಥಾನದ ಆವರಣದಲ್ಲಿ ಒಡೆದು ಅದರಲ್ಲಿರುವ ಹಣವನ್ನು ಕದ್ದೊಯ್ದಿದ್ದಾರೆ.
ಈ ಬಗ್ಗೆ ದೇವಸ್ಥಾನದ ಆಡಳಿತ ಸಮಿತಿಯವರು ನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದು, ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.