ಶಿರಸಿ: ಶಿರಸಿಯ ಲಯನ್ಸ್ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಭಗವದ್ಗೀತಾ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸಹಶಿಕ್ಷಕರ ಮಾರ್ಗದರ್ಶನದಲ್ಲಿ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಅಪೂರ್ವಾ ಹೆಗಡೆ ಪ್ರಥಮ ಸ್ಥಾನ ಮತ್ತು 6ನೇ ತರಗತಿಯ ಸ್ವರ್ಣಾ ಹೆಗಡೆ ತೃತೀಯ ಸ್ಥಾನವನ್ನು ಹಾಗೂ ಭಾಷಣ ಸ್ಪರ್ಧೆಯಲ್ಲಿ 7ನೇ ತರಗತಿಯ ಅಭಿಜ್ಞಾ ಹೆಗಡೆ ಪ್ರಥಮ ಸ್ಥಾನ ಮತ್ತು 10ನೇ ತರಗತಿಯ ಶೃದ್ಧಾ ಹೆಗಡೆ ತೃತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮಕ್ಕಳ ಈ ಅಪೂರ್ವ ಸಾಧನೆಯನ್ನು ಶ್ಲಾಘಿಸಿದ್ದಾರೆ.