ದಾಂಡೇಲಿ : ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದ ಹೊರಬಂದಿರುವ ಜನರಿಗೆ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ನೆರೆಯ ಕೇರಳದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯನ್ನು ಕಾಣುತ್ತಿದ್ದು, ಆದರೆ ಇದೀಗ ಹೊಸ ವರ್ಷದ ಆಚರಣೆಯ ಹೊಸ್ತಿಲಲ್ಲೇ ಕೋವಿಡ್ ವಕ್ಕರಿಸತೊಡಗಿದೆ. ಕೊರೋನಾದ ಬಗ್ಗೆ ಜನರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ.
ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಉಪಯೋಗಿಸಬೇಕು, ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ತಕ್ಷಣವೇ ವೈದ್ಯರನ್ನು ಇಲ್ಲವೇ ಸಾರ್ವಜನಿಕ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಹಾಗೂ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ.ಅನಿಲ್ ಕುಮಾರ್ ನಾಯ್ಕ ಮಂಗಳವಾರ ಮಾಧ್ಯಮದ ಮೂಲಕ ಜನತೆಗೆ ಕರೆ ನೀಡಿದ್ದಾರೆ.