ಜೋಯಿಡಾ: ಭಾರತ ಸರ್ಕಾರ, ಜಿಲ್ಲಾ ಪಂಚಾಯತ್ ಉತ್ತರಕನ್ನಡ, ಗ್ರಾಮ ಪಂಚಾಯತ್ ನಂದಿಗದ್ದೆ, ಸಂಜೀವಿನಿ ಮಹಿಳಾ ಒಕ್ಕೂಟ ನಂದಿಗದ್ದೆ ಇವುಗಳ ಸಹಯೋಗದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸoವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡುವ ವಿಶೇಷ ಗ್ರಾಮ ಸಭೆ ಹಾಗೂ ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆಯ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಜೋಯಿಡಾ ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಸಭಾಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿದ ಸ್ವ ಸಹಾಯ ಸಂಘಗಳ ತಾಲೂಕು ವ್ಯವಸ್ಥಾಪಕರಾದ ಡಿ.ಮರಿಸ್ವಾಮಿ, ಜಲ ಜೀವನ್ ಮಿಷನ್ ಸಂಯೋಜಕರಾದ ದಿನೇಶ್.ಜಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹನೀಫ್ ಸೈಯದ್ ಅವರುಗಳು ಉಪಯುಕ್ತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಅರುಣ್ ದೇಸಾಯಿ, ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಗಣೇಶ ಸಾವರ್ಕರ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಜಾನನ ಸಾವರ್ಕರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ವ – ಸಹಾಯ ಸಂಘಗಳ ಪಧಾಧಿಕಾರಿಗಳು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಮಹಿಳಾ ಸಂಘದ ಭಾರತಿ ಹೆಗಡೆ ಮತ್ತು ಲತಾ ಭಾಗವತ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.