Slide
Slide
Slide
previous arrow
next arrow

ದಾಂಡೇಲಿಯ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಅಕ್ರಂ ಖಾನ್ ಆಗ್ರಹ

300x250 AD

ದಾಂಡೇಲಿ: ನಗರದ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಆಗ್ರಹಿಸಿದ್ದಾರೆ.

ಅವರು ಶುಕ್ರವಾರ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಆಶ್ರಯದಡಿ ಇ.ಎಸ್.ಐ ಆಸ್ಪತ್ರೆಯ ಮುಂಭಾಗದಲ್ಲಿ ಸಭೆ ಸೇರಿ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆ ವಿನಹ: ಆಸ್ಪತ್ರೆಯನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ. ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನಲ್ಲಿ ಅತೀ ಹೆಚ್ಚಿನ‌ ಸಂಖ್ಯೆಯಲ್ಲಿ ನೊಂದಾಯಿತ ಕಾರ್ಮಿಕರಿದ್ದು, ಅವರ ಹಿತದೃಷ್ಟಿಯಿಂದ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಮತ್ತು ಇ.ಎಸ್.ಐ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಇ.ಎಸ್.ಐ ಆಸ್ಪತ್ರೆಯ ಅಧೀಕ್ಷಕರಾದ ವಿನಾಯಕ ಪವಾರ್ ಅವರ‌ ಮೂಲಕ ನೀಡಲಾಯಿತು.

300x250 AD

ಈ ಸಂದರ್ಭದಲ್ಲಿ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top