ಯಲ್ಲಾಪುರ: ಪಟ್ಟಣದಲ್ಲಿ ಇತ್ತೀಚಿನ ದಿವಸಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ ರವಿವಾರ ಪಟ್ಟಣದ ವಿವಿಧೆಡೆ ಹಂದಿ ಹಿಡಿಯುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಹಂದಿ ಹಾವಳಿ ಮಿತಿ ಮೀರಿತ್ತು. ಎಲ್ಲೆಂದರಲ್ಲಿ ಹಂದಿಗಳು ನುಗ್ಗಿ ಪಟ್ಟಣದ ವಾಸಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು.ಈಗ ಹಂದಿ ಹಿಡಿದು ಬೇರೆಡೆಗೆ ಸಾಗಿಸುವ ಕಾರ್ಯ ನಡೆದಿದ್ದು,ಇದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.