ದಾಂಡೇಲಿ : ನಗರದ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಶಾಸಕ ಆರ್.ವಿ.ದೇಶಪಾಂಡೆಯವರಿಗೆ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.
ಇಎಸ್ಐ ಆಸ್ಪತ್ರೆಯನ್ನು ಮುಚ್ಚುವ ಯತ್ನ ನಡೆಯುತ್ತಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿತ ಕಾರ್ಮಿಕರಿದ್ದು, ಅವರ ಹಿತದೃಷ್ಟಿಯಿಂದ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಮತ್ತು ಇ.ಎಸ್.ಐ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಶಾಸಕ ಆರ್.ವಿ.ದೇಶಪಾಂಡೆಯವರಿಗೆ ಅಕ್ರಂ ಖಾನ್ ಮನವಿ ಮಾಡಿದ್ದಾರೆ.