ದಾಂಡೇಲಿ : ನೈಋತ್ಯ ಹುಬ್ಬಳ್ಳಿ ರೈಲ್ವೆ ವಿಭಾಗದ ಸಲಹಾ ಸಮಿತಿ ಸದಸ್ಯರಾಗಿ ನಗರದ ಪ್ರಮುಖರಾದ ಗೋಪಿ ಸೇಲಾರ್ ಮತ್ತು ಹೇಮಂತ್ ವೈಷ್ಣವ್ ಅವರನ್ನು ನೇಮಕ ಮಾಡಲಾಗಿದೆ.
ನೈಋತ್ಯ ಹುಬ್ಬಳ್ಳಿ ರೈಲ್ವೆ ವಿಭಾಗದ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಇಬ್ಬರನ್ನು ಮಾಜಿ ಶಾಸಕರಾದ ಸುನೀಲ್ ಹೆಗಡೆ ಮತ್ತು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಚಂದ್ರಕಾಂತ ಕ್ಷೀರಸಾಗರ ಅವರು ಅಭಿನಂದಿಸಿದ್ದಾರೆ.