ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಜಿ. ಹೆಬ್ಬಾರ ಇವಳು ಶ್ರೀ ಭಗವದ್ಗೀತಾ ಅಭಿಯಾನದ ಪ್ರಯುಕ್ತ ಬೆಳಗಾವಿಯಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಇವಳ ಈ ಸಾಧನೆಗೆ ಆಡಳಿತ ಮಂಡಳಿ ಹಾಗೂ ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಅಭಿನಂದಿಸಿದೆ.