Slide
Slide
Slide
previous arrow
next arrow

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಿಗೆ ವಿವಿ ಮಟ್ಟದ ತರಬೇತಿ ಕಾರ್ಯಕ್ರಮ

300x250 AD

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಹಾಗೂ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಕುಮಟಾ ಇವರ ಸಹಯೋಗದಲ್ಲಿ ಉತ್ತರಕನ್ನಡ ಜಿಲ್ಲೆಯ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಮಟ್ಟದ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕೆನರಾ ಕಾಲೇಜ್ ಸೊಸೈಟಿ(ರಿ) ಕುಮಟಾ ಕೌನ್ಸಿಲ್ ಸದಸ್ಯ ಕಿರಣ ಕಾಶಿನಾಥ ನಾಯಕ ಇವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಕಾರ್ಯಾಗಾರದ ಯಶಸ್ಸನ್ನು ಕೋರಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ರಾಷ್ಟ್ರೀಯ ಸೇವಾ ಯೋಜನಾಕೋಶ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಎಂ ಬಿ. ದಳಪತಿ ಇವರು ಎನ್.ಎಸ್.ಎಸ್. ಕಾರ್ಯಕ್ರಮವನ್ನು ಎಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಮತ್ತು ಪ್ರತಿಯೊಂದು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮದ ಉದ್ದೇಶವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಪ್ರೀತಿ ಪಿ. ಭಂಡಾರಕರ ಇವರು ಯುವಜನತೆಗೆ ತರಬೇತಿಯ ಪ್ರಾಮುಖ್ಯತೆ ಹಾಗೂ ಜೀವನ ಮೌಲ್ಯಗಳನ್ನು ಕಾಪಾಡಿ ಮುಂದುವರಿಸಬೇಕು ಎಂದು ಹೇಳಿದರು.

ಉದ್ಘಾಟನಾ ಸಮಾರಂಭದ ಬಳಿಕ ಉತ್ತರಕನ್ನಡ ಜಿಲ್ಲೆಯ ಬೇರೆ ಬೇರೆ ಮಹಾವಿದ್ಯಾಲಯಗಳಿಂದ ಆಗಮಿಸಿದ ಎನ್.ಎಸ್.ಎಸ್. ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳು ಮತ್ತು ವಾರ್ಷಿಕ ವಿಶೇಷ ಶಿಬಿರಗಳ ಕುರಿತು ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿಗಳಾದ ಡಾ. ಜಿ. ಟಿ. ಭಟ್‌ ಗೋಷ್ಠಿಯನ್ನು ನಡೆಸಿಕೊಟ್ಟರು. ಹೆಚ್.ಐ.ವಿ. ಏಡ್ಸ್ ನಿಯಂತ್ರಣದ ಕುರಿತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ಹರ್ಷಾ ವೆಂಕಟೇಶ ಗೋಷ್ಠಿಯನ್ನು ನಡೆಸಿಕೊಟ್ಟರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳ ಸಲ್ಲಿಕೆ ಕುರಿತು ಡಾ. ಎಂ. ಬಿ. ದಳಪತಿ ಇವರು ಗೋಷ್ಠಿಯನ್ನು ನಡೆಸಿಕೊಟ್ಟರು.

300x250 AD

ಗೋಷ್ಠಿಗಳ ಬಳಿಕ ಸಮಾರೋಪ ಕಾರ್ಯಕ್ರಮ ಜರುಗಿತು. ಕುಮಾರಿ. ಮಾನಸಾ ಭಟ್ಟ ಹಾಗೂ ದಿವ್ಯಾ ಜಿ. ಭಟ್ಟ ಪ್ರಾರ್ಥಿಸಿದರು. ಕಾಲೇಜಿನ ಪ್ರಾಧ್ಯಾಪಕರಾದ ರೇಖಾ ಸಿ. ಯೆಲಿಗಾರ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಶಿಕ್ಷಕ ವಿದ್ಯಾರ್ಥಿಗಳಾದ ಅನ್ವಿತಾ ಭಟ್ಟ ಹಾಗೂ ಸುಮಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಆಪ್ತಸಮಾಲೋಚಕ ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಮಟಾದ ಪ್ರದೀಪ ನಾಯ್ಕ ನಡೆಸಿಕೊಟ್ಟರು.

Share This
300x250 AD
300x250 AD
300x250 AD
Back to top