Slide
Slide
Slide
previous arrow
next arrow

ದಾಂಡೇಲಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

300x250 AD

ದಾಂಡೇಲಿ : ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಪಕ್ಷದ ಕಾರ್ಯಾಲಯದ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್. ಹೆಗಡೆ, ಈ ದೇಶದಲ್ಲಿ ತನ್ನದೆ ಆದ ಘನ‌ ಪರಂಪರೆಯನ್ನು ಹೊಂದಿರುವ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷವು ಸರ್ವ ಸಮನ್ವಯತೆಯ ಜೊತೆಗೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಲೆ ಬಂದಿದೆ ಎಂದರು. ಸ್ವಾತಂತ್ರ್ಯ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಹೇಳಿದರು.

300x250 AD

ಈ ಸಂದರ್ಭದಲ್ಲಿ ನಗರ ಸಭೆಯ ಮಾಜಿ ಅಧ್ಯಕ್ಷೆ ಸರಸ್ವತಿ ರಜಪೂತ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ್, ನಗರ ಸಭಾ ಸದಸ್ಯರುಗಳಾದ ಸುಧಾ.ಆರ್.ಜಾಧವ್, ಸುಗಂಧ ಕಾಂಬಳೆ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರೇಣುಕಾ ಬಂದಂ, ಪಕ್ಷದ ಮುಖಂಡರಾದ ಎಂ.ಆರ್.ನಾಯಕ, ರಫೀಕ್, ಶಿವಪ್ಪ ನಾಯ್ಕ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top