Slide
Slide
Slide
previous arrow
next arrow

ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ಯಶಸ್ವಿ

300x250 AD

ಹಳಿಯಾಳ: ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯು ಶಾಸಕರಾದ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು.

ಈ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆ ಆರೋಗ್ಯ ಕೇಂದ್ರದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ, ಜನಸಾಮಾನ್ಯರಿಗೆ ಹೆಚ್ಚುವರಿ ಆರೋಗ್ಯ ಸೇವೆ ನೀಡುವ ಕುರಿತು ಚರ್ಚಿಸಿ, ಒಳರೋಗಿಗಳು ಮತ್ತು ಹೊರರೋಗಿಗಳ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದರು.

300x250 AD

ಸಭೆಯಲ್ಲಿ ತಹಶೀಲ್ದಾರ್ ಆರ್.ಎಚ್.ಭಾಗವಾನ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಪರಶುರಾಮ ಗಸ್ತಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಕದಂ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top