Slide
Slide
Slide
previous arrow
next arrow

ವೈನ್ಸ್, ಬಾರ್, ರೆಸ್ಟೋರೆಂಟ್ ಮಾಲಕರೊಂದಿಗೆ ಪೊಲೀಸರ ಸಭೆ

300x250 AD

ದಾಂಡೇಲಿ : ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಡಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ನಗರದ ವೈನ್ಸ್ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕರ ಮತ್ತು ವ್ಯವಸ್ಥಾಪಕರ ಜೊತೆ ಸಭೆಯನ್ನು ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೆಕರ್ ಅವರು ಸರಕಾರದ ನಿಯಾಮವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಗದಿತ ಸಮಯಕ್ಕೆ ಅನುಗುಣವಾಗಿ ವ್ಯಾಪಾರ ಚಟುವಟಿಕೆಯನ್ನು ನಡೆಸಬೇಕು. ನಿಗದಿತ ಸಮಯದೊಳಗಡೆ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಶಾಂತಿ ಸುವ್ಯವಸ್ಥೆಗೆ ದಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ನಗರದ ವೈನ್ ಹಾಗೂ ಬಾರ್ & ರೆಸ್ಟೋರೆಂಟ್ ಮಾಲಕರು ಹಾಗೂ ವ್ಯವಸ್ಥಾಪಕರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top