ಅಂಕೋಲಾ: ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸುನೀಲ್ ಎಮ್. ನೇತೃತ್ವದಲ್ಲಿ ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನರೇಗಾ, ವಸತಿ, ಎಸ್ಬಿಎಮ್ ಯೋಜನೆ ಹಾಗೂ ತೆರಿಗೆ ಪರಿಷ್ಕರಣೆ, 15ನೇ ಹಣಕಾಸು, ಮುಖ್ಯಮಂತ್ರಿ ಗ್ರಾಮ ವಿಕಾಸ, ಅಮೃತ ಗ್ರಾಮ ಯೋಜನೆ, ಸೋಲಾರ್ ರೂಪ್ಟಾಪ್, ಗ್ರಂಥಾಲಯ, ಸಿಬ್ಬಂದಿ ವೇತನ, ಸಕಾಲ, ಜಿಪಿಡಿಪಿ, ಇತರ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಯಾವುದೇ ಯೋಜನೆಯ ಪ್ರಗತಿಯಲ್ಲಿ ಕುಂಠಿತವಾಗದಂತೆ ಅಧಿಕಾರಿಗಳು ಜಾಗೃತೆ ವಹಿಸಬೇಕು ಹಾಗೂ ಕಾಲಕಾಲಕ್ಕೆ ಸಿಬ್ಬಂದಿ ವೇತನ ಮತ್ತು ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ನಾಗಭೂಷಣ ಕಲ್ಮನೆ, ತಾ. ಪಂ ವ್ಯವಸ್ಥಾಪಕ ನೀಲಕಂಠ ನಾಯಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.