ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು,ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಳೆಯಿಂದ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್ ಇಳಿದಿದ್ದು, ಚಾಲಕ ಬಡೇಸಾಬ್ ಮುಜಾವರ್‌ಗೆ ಗಂಭೀರ ಗಾಯಗಳಾಗಿವೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ನೌಕಾನೆಲೆಗೆ ತೆರಳುತ್ತಿದ್ದ ವೇಳೆ ತಿರುವಿನಲ್ಲಿ ಸ್ಕಿಡ್ ಆಗಿ ಕಾಲುವೆಗೆ ಇಳಿದು, ಬಸ್‌ನಲ್ಲಿದ್ದ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.