Slide
Slide
Slide
previous arrow
next arrow

ದಾಂಡೇಲಿ ಪೊಲೀಸ್ ಮೈದಾನದಲ್ಲಿ ಸ್ನೇಹ ಸಮ್ಮೇಳನ‌ ಕಾರ್ಯಕ್ರಮ

300x250 AD

ದಾಂಡೇಲಿ : ಪೊಲೀಸ್ ಇಲಾಖೆಯ ಆಶ್ರಯದಡಿ ನಗರದ ಪೊಲೀಸ್ ಮೈದಾನದಲ್ಲಿ ಹೊಸ ವರ್ಷದ ನಿಮಿತ್ತ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಕಟಗಿ ಅವರು ಸದಾ ಕೆಲಸದ ಒತ್ತಡದಲ್ಲಿರುವ ಪೊಲೀಸ್ ಹಾಗೂ ಅವರ ಕುಟುಂಬ ಸದಸ್ಯರು ಸಹ ಸಂಭ್ರಮ ಸಡಗರದಲ್ಲಿ ಭಾಗವಹಿಸಬೇಕೆಂಬ ಉದ್ದೇಶದಡಿ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲರೂ ಹೊಸ ವರ್ಷವನ್ನು ಸಂಭ್ರಮ ಸಡಗರದಿಂದ ಆಚರಿಸಿದರೇ, ಪೊಲೀಸ್ ಸಿಬ್ಬಂದಿಗಳು ಮಾತ್ರ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ರಸ್ತೆಯಲ್ಲಿ ನಿಂತು ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗುತ್ತದೆ. ಹಾಗಾಗಿ ಪೊಲೀಸರಿಗೆ ಕೆಲಸದ ಒತ್ತಡವಾದರೆ, ಪೊಲೀಸ್ ಕುಟುಂಬಗಳು ಕೂಡ ಸಂಭ್ರಮದಿಂದ ವಂಚಿತರಾಗುತ್ತಿರುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ನಗರದ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ನಗರದ ಸಾರ್ವಜನಿಕರು ತುಂಬು ಹೃದಯದ ಸಹಕಾರವನ್ನು ನೀಡುತ್ತಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಬಿಡುವೆ ಇಲ್ಲದ ಇಲಾಖೆ ಪೊಲೀಸ್ ಇಲಾಖೆ. ಆದರೂ ಪ್ರತಿವರ್ಷ ಕ್ರೀಡಾಕೂಟ, ಸ್ನೇಹ ಸಮ್ಮೇಳನದಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

300x250 AD

ವೇದಿಕೆಯಲ್ಲಿ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಸಿಪಿಐಗಳಾದ ಭೀಮಣ್ಣ.ಎಂ.ಸೂರಿ, ಸುರೇಶ್ ಸಿಂಗೆ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ನಗರದ ಗಣ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಕುಟುಂಬಸ್ಥರು ಮೊದಲಾದವರು ಉಪಸ್ಥಿತರಿದ್ದರು.

ಪಿಎಸ್ಐ ಗಳಾದ ಯಲ್ಲಪ್ಪ.ಎಸ್ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಐ.ಆರ್.ಗಡ್ಡೇಕರ್ ವಂದಿಸಿದರು. ಎಎಸೈ ಗಿರೀಶ್ ಕಾರ್ಯಕ್ರಮವನ್ನು‌ ನಿರೂಪಿಸಿದರು.
ಆನಂತರ ಸ್ಥಳೀಯ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.

Share This
300x250 AD
300x250 AD
300x250 AD
Back to top