ದಾಂಡೇಲಿ : ನಗರದ ವನಶ್ರೀ ನಗರದಲ್ಲಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ದೇವಸ್ಥಾನ ಸೇವಾ ಸಮಿತಿಯ ಆಶ್ರಯದಡಿ ವಾರ್ಷಿಕೋತ್ಸವ ಕಾರ್ಯಕ್ರಮವು ಗುರುವಾರ ಶ್ರದ್ಧಾಭಕ್ತಿಯಿಂದ ಜರುಗಿತು.
ಬೆಳಗ್ಗಿನಿಂದಲೇ ಪಂಚಾಮೃತ ಅಭಿಷೇಕ, ವಿಷ್ಣು ಹೋಮ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾಪೂಜೆಯನ್ನು ನೆರವೇರಿಸಲಾಯಿತು. ಮಹಾಪೂಜೆಯಾದ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನಕೂಟ ವಿತರಿಸಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಶ್ರೀ ಕೃಷ್ಣ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.