ಶಿರಸಿ: ರಾಮ ಮಂದಿರಕ್ಕಾಗಿ ಕರಸೇವೆ ಮಾಡಿದ ಕರಸೇವಕರ ಮೇಲೆ ಹಾಗು ಹಿಂದು ಸಂಘಟನೆಗಳ ಕಾರ್ಯಕರ್ತರ ಮೇಲೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜ.7, ಬೆ.10 ಗಂಟೆಗೆ ನಗರದ ಡಿವೈಎಸ್ಪಿ ಪೋಲೀಸ್ ಠಾಣೆಯೆದುರು ಪ್ರತಿಭಟನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.