ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಕಾರವಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ಕರ್ನಾಟಕ ಆಹಾರ ನಿಗಮ ಹಾಗೂ ದಿವೇಕರ ವಾಣಜ್ಯ ಕಾಲೇಜು ಮತ್ತು ಪಿ.ಜಿ.ಕೇಂದ್ರ ಕಾರವಾರ ರವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಜ. 9 ರಂದು ಬೆಳಗ್ಗೆ 10.30 ಗಂಟೆಗೆ ಕಾರವಾರದ ದಿವೇಕರ ವಾಣಿಜ್ಯ ಕಾಲೇಜು ಮತ್ತು ಪಿ.ಜಿ.ಕೇಂದ್ರ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ.ಬಿ.ಎಲ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಗಂಗೂಬಾಯಿ ರಮೇಶ ಮಾನಕರ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ. ಸುರೇಂದ್ರಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ.ಡಿ.ರಾಯ್ಕರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನೈನಾ ಅಶೋಕ ಕಾಮಟೆ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಎನ್. ಜಾಂಬಾವಳಿಕರ್, ದಿವೇಕರ ವಾಣಿಜ್ಯ ಕಾಲೇಜು ಮತ್ತು ಪಿ.ಜಿ.ಕೇಂದ್ರದ ಪ್ರಾಂಶುಪಾಲ ಕೇಶವ.ಕೆ.ಜಿ, ನ್ಯಾಯವಾದಿ ಪದ್ಮಾ.ಕೆ.ತಾಂಡೇಲ ಇತರರು ಪಾಲ್ಗೊಳ್ಳಲಿದ್ದಾರೆ.