ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಶ್ರೀವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಶಿರಸಿಯ ನಾರಾಯಣದಾಸ ಅವರಿಂದ ಹರಿಕಥೆ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂತು.
ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಪ್ರಸರಿಸುವಲ್ಲಿ ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಮೂಡಿಬಂತು. ಜನರ ಮನಸ್ಸುಗಳಲ್ಲಿ ಸತ್ಯ ಮತ್ತು ಸದ್ಗುಣನಿಷ್ಠತೆಯನ್ನು ತುಂಬುವುದು, ಭಕ್ತಿಯ ಬೀಜಗಳನ್ನು ಬಿತ್ತುವುದು ಹಾಗೂ ಅವರಿಗೆ ಕಥೆಗಳ ಮೂಲಕ ಆತ್ಮಜ್ಞಾನದ ಬಗ್ಗೆ ಕಲಿಸುವುದು, ಮುಕ್ತಿಯ ಮಾರ್ಗವನ್ನು ತೋರಿಸುವುದು ಹರಿಕಥೆಯ ಆಶಯವಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.