ಶಿರಸಿ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಕೊನೆಯ ದಿನವಾದ ಜ.16ರಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಶಿರಸಿ ಚಿಪಗಿಯಲ್ಲಿರುವ ಜೆ ಎಮ್ ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ISI ಮಾರ್ಕಿನ ಹೆಲ್ಮೆಟ್ ಬಳಸಬೇಕು. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ವಾಹನ ಚಲಾಯಿಸಿದಲ್ಲಿ ಆಗುವ ಅನಾಹುತಗಳ ಬಗ್ಗೆ, ಅತಿ ವೇಗದ ಚಾಲನೆಯಿಂದ ಆಗುವ ಅನಾಹುತಗಳ ಬಗ್ಗೆ. ಅನಾವಶ್ಯವಾಗಿ ಶಾಲಾ ಕಾಲೇಜುಗಳಿಗೆ ಮೋಟಾರ್ ಸೈಕಲ್ ತರುವುದರಿಂದ ಆಗುವ ತೊಂದರೆಗಳ ಬಗ್ಗೆ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಸಮಗ್ರವಾಗಿ ತಿಳಿ ಹೇಳಲಾಯಿತು. ಪ್ರತಿ ದಿವಸ ಹೆಚ್ಚುತ್ತಿರುವ ಅಪಘಾತಗಳಿಗೆ ಪ್ರಮುಖ ಕಾರಣಗಳನ್ನು ಮತ್ತು ಪರಿಹಾರಗಳನ್ನು ತಿಳಿಸಲಾಯಿತು ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿರಸಿ ಕಾರ್ಯದರ್ಶಿ ಗಣಪತಿ ಹೆಗಡೆ ಮತ್ತು ಗ್ರಾಮೀಣ ಪೊಲೀಸ್ ಠಾಣೆ ಎಎಸ್ಐ ನಾರಾಯಣ ಶಿರಾಲಿ, ಪೋಲಿಸ್ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಮುಚ್ಚಂಡಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರತಿಜ್ಞಾವಿಧಿ ಓದಿಸಲಾಯಿತು. ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಪೊಲೀಸ ಇಲಾಖೆ ವತಿಯಿಂದ ಹಂಚಲಾಯಿತು ರಸ್ತೆ ಸುರಕ್ಷತಾ ನಿಯಮದ ಬಗ್ಗೆ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವಿವರವಾಗಿ ತಿಳಿಸಿ ಹೇಳಲಾಯಿತು.