Slide
Slide
Slide
previous arrow
next arrow

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

300x250 AD

ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ. 2022 ಜನವರಿ 1 ರಿಂದ ಡಿಸೆಂಬರ್ 31 ರೊಳಗಿನ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡಿರುವ ಕೃತಿಗಳಾಗಿದ್ದು, ಕೃತಿಯಲ್ಲಿ ಪ್ರಥಮ ಮುದ್ರಣ 2022 ಎಂದು ಮುದ್ರಿತವಾಗಿರಬೇಕು. ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ , ವೈಚಾರಿಕ/ಅಂಕಣ ಬರಹ, ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ, ಕನ್ನಡದಿಂದ ಅನ್ಯ ಭಾಷೆಗಳಿಗೆ ಅನುವಾದಗೊಂಡ , ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷ್ಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಬಹುದು. ಮರುಮುದ್ರಣವಾದ ಪುಸ್ತಕಗಳು, ಪಿ.ಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಸಾಹಿತಿಗಳ ಕೃತಿ, ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲ್ಪಡುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಫೆಬ್ರವರಿ 20 ರೊಳಗೆ ಖುದ್ದಾಗಿ, ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top