ಕಾರವಾರ: ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ ಯುವತಿಯರಿಗಾಗಿ, ಜನವರಿ 29 ರಿಂದ ನಡೆಯುವ ಗೃಹಬಳಕೆ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಫ್ಯಾನ್, ಪಂಪಸೆಟ್ ಮತ್ತು ವೈರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ,ಇಂಡಸ್ಟ್ರಿಯಲ್ ಏರಿಯಾ, ಹೆಗಡೆರಸ್ತೆ, ಕುಮಟಾ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೊ, ರೇಶನಕಾರ್ಡ, ಆಧಾರಕಾರ್ಡ, ಬ್ಯಾಂಕ್ ಪಾಸ್ ಬುಕ್, ಪಾನ್ಕಾರ್ಡಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆtel:+919449860007,tel:+919538281989,tel:+919916783825,tel:+918880444612, tel:+919620962004ನ್ನು ಸಂಪರ್ಕಿಸಬಹುದೆಂದು ಕುಮಟಾ ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.