ಯಲ್ಲಾಪುರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಯಲ್ಲಾಪುರ ತಾಲೂಕಿನ, ಅರಣ್ಯ ಅತಿಕ್ರಮಣದಾರರ ಸಭೆಯನ್ನು ತಾಲೂಕಿನ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ, ಜನವರಿ ೨೧, ರವಿವಾರ ಮುಂಜಾನೆ ೯:೩೦ ಕ್ಕೆ ಕರೆಯಲಾಗಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿಗೆ ಸಂಬಂಧಿಸಿದ ಕಾನೂನಾತ್ಮಕ ಅಂಶ, ಸುಫ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂದು ಪರಿಸರವಾದಿಗಳು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಕುರಿತು ಹಾಗೂ ಅರಣ್ಯ ಅಧಿಕಾರಿಗಳಿಂದ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯದ ಕುರಿತು ಚರ್ಚಿಸಲಾಗುವುದಲ್ಲದೇ, ಖಾಯಂ ಸದಸ್ಯರಿಗೆ ಗುರುತಿನ ಪತ್ರ ವಿತರಿಸಲಾಗುವುದು. ಆಸಕ್ತ ಅರಣ್ಯವಾಸಿಗಳು ಸಭೆಗೆ ಆಗಮಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.