ಕಾರವಾರ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾತ್ಹೋಬಾರ್ ಮುರ್ಡೇಶ್ವರ್ ದೇವಸ್ಥಾನದ ಮಹಾರಥೋತ್ಸವವು ಜ.20 ರಂದು ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜ.20 ರ ಬೆಳಗ್ಗೆ 6 ಗಂಟೆಯಿಂದ ಜ. 21 ರ ಬೆಳಿಗ್ಗೆ 6 ಗಂಟೆಯವರೆಗೆ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಬಂದ್ ಮಾಡುವಂತೆ ಹಾಗೂ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.