ದಾಂಡೇಲಿ : ಜನವರಿ. 28 ರಂದು ಶಿರಸಿಯಲ್ಲಿ ನಡೆಯಲಿರುವ ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಾಂಡೇಲಿಯ ಪತ್ರಕರ್ತರನ್ನು ಮತ್ತು ಗಣ್ಯರನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಪಾಟೀಲ್ ಆತ್ಮೀಯವಾಗಿ ಅಹ್ವಾನಿಸಿದ್ದಾರೆ.
ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಪತ್ರಕರ್ತ ಮಿತ್ರರಿಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಅಕ್ಷಯ್ ಗೋಸಾವಿ, ಸದಸ್ಯ ಪ್ರವೀಣ್ ಸುಲಾಖೆ ಮತ್ತು ಡಿಜಿಟಲ್ ಮಾಧ್ಯಮದ ಸರ್ಪರಾಜ್ ಶೇಖ್ ಉಪಸ್ಥಿತರಿದ್ದರು.