ಶಿರಸಿ: ದಿ ತೋಟಗಾರ್ಸ್ ಕೋ- ಆಪರೇಟಿವ್ ಸೇಲ್ ಸೊಸೈಟಿ ಪ್ರಧಾನ ಕಛೇರಿಯಲ್ಲಿ ಜ.20, ಶನಿವಾರದಂದು ಅರ್ಹ ಸದಸ್ಯರ ಮಕ್ಕಳಿಗೆ ಶಿಕ್ಷಣ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಅಭ್ಯಸಿಸುತ್ತಿರುವ ಒಟ್ಟೂ 30 ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಆರ್ಥಿಕ ಸ್ಥಿತಿಯನ್ನು ಗುರುತಿಸಿ ಸಹಾಯಧನದ ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಫಲಾನುಭವಿ ವಿದ್ಯಾರ್ಥಿಗಳಿಗೆ ಒಟ್ಟೂ ರೂ. 9,97,200/-ಅನ್ನುಉನ್ನತ ವ್ಯಾಸಂಗಕ್ಕೋಸ್ಕರ ನೀಡಲಾಯಿತು. ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೆಂ. ವೈದ್ಯ ಮತ್ತಿಘಟ್ಟ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷರಾದ ಎಂ.ಎನ್.ಭಟ್ಟತೋಟಿಮನೆ ಸ್ವಾಗತಿಸಿದರು. ಸಂಘದ ಎಲ್ಲ ನಿರ್ದೇಶಕರು ಹಾಗೂ ಪ್ರಭಾರಿ ಪ್ರಧಾನ ವ್ಯವಸ್ಥಾಪಕ ವಿಜಯಾನಂದ ಭಟ್ಟ ಉಪಸ್ಥಿತರಿದ್ದರು.ನಿರ್ದೇಶಕ ರವೀಂದ್ರ ಜೆ. ಹೆಗಡೆ ಆಭಾರ ಮನ್ನಣೆ ನೆರವೇರಿಸಿದರು. ಸಂಘದ ನೌಕರರಾದ ಗೋಪಾಲ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.