ಜೋಯಿಡಾ : ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮವನ್ನು ಜೋಯಿಡಾದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ಮಾತನಾಡಿದ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿಯವರು ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಸಮಾಜವನ್ನು ಜಾಗೃತಗೊಳಿಸುವ ಮಹೋನ್ನತ ಸಂದೇಶವಿತ್ತು. ಅಂಬಿಗರ ಚೌಡಯ್ಯನವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.