ಹೊನ್ನಾವರ: ತಾಲೂಕಿನ ಹೊಸಾಕುಳಿಯಲ್ಲಿ ರಾಮ ಭಕ್ತರೆಲ್ಲರೂ ಸೇರಿ ಊರಿನ ಅಶ್ವತ್ಥ ಕಟ್ಟೆಯಲ್ಲಿ ಪ್ರಭು ಶ್ರೀರಾಮನ ಫೋಟೋ ಇರಿಸಿ ವಿಶೇಷ ಸಾಂಪ್ರದಾಯಿಕ ಶೈಲಿಯ ಅಲಂಕಾರದೊಂದಿಗೆ ಪೂಜಿಸಿ, ಪ್ರಸಾದ ಭೋಜನದ ವ್ಯವಸ್ಥೆ ಮಾಡಿದ್ದರು. ಸಾರ್ವಜನಿಕರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು, ಪ್ರಸಾದ ಸ್ವೀಕರಿಸಿ ಶ್ರೀರಾಮನ ಕೃಪೆಗೆ ಪಾತ್ರರಾದರು.