ಹಳಿಯಾಳ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ರಂಗೋಲಿಗಳ ಮೂಲಕ ಸಮುದಾಯದ ಜನತೆಗೆ ಅರಿವು ಮೂಡಿಸುವ ಅಭಿಯಾನವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿಯವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿಯವರು ಹೆಣ್ಣೊಂದು ಕಲಿತರೆ ಮನಮಂದಿ ಕಲಿತಂತೆ ಎನ್ನುವಂತೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣವಂತರಾದರೇ ಸದೃಢ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಜನಮಾನಸಕ್ಕೆ ಅರಿವು ಮೂಡಿಸುವ ಮೂಲಕ ಪ್ರತಿಯೊಂದು ಮಗುವನ್ನು ಶಿಕ್ಷಣವಂತನನ್ನಾಗಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ವಲಯ ಮೇಲ್ವಿಚಾರಕಿಯರು, ಮಕ್ಕಳು, ಕಿಶೋರಿಯರು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.