ದಾಂಡೇಲಿ : ತಾಲೂಕಾಡಳಿತ ಮತ್ತು ನಗರಾಡಳಿತದ ಸಂಯುಕ್ತ ಆಶ್ರಯದಡಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಬುಧವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಗಣರಾಜ್ಯೋತ್ಸವದ ನಿಮಿತ್ತ ಈಗಾಗಲೇ ಶಾಲಾ, ಕಾಲೇಜು ಹಾಗು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಗಣರಾಜ್ಯೋತ್ಸವದ ದಿನ ಹಳೆ ನಗರಸಭೆಯ ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದ್ದು, ಅದೇ ದಿನ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುತ್ತದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕೆಂದು ಆರ್.ಎಸ್.ಪವಾರ್ ಮನವಿಯನ್ನು ಮಾಡಿದ್ದಾರೆ.