ಕಾರವಾರ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಕುರಿತು ಜ.25 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸರ್ಕಾರೇತರ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.