ದಾಂಡೇಲಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಡಿ ದಾಂಡೇಲಿಯ ಸಾಹಿತ್ಯ ಭವನದಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿ ನಮ್ಮ ದೇಶದ ಸಾಂವಿಧಾನಿಕ ಹಾಗೂ ಸಾಂಸ್ಕೃತಿಕ ಅನನ್ಯತೆಯನ್ನು ಸಾರಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗಣತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ್ ಆನೆಹೊಸೂರ, ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ ಪಾಲನಕರ, ಸುರೇಶ ಕಾಮತ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಆರ್.ಪಿ. ನಾಯ್ಕ, ಕಸಾಪ ಮಾಜಿ ಅಧ್ಯಕ್ಷ ಸುರೇಶ ಕುರ್ಡೇಕರ, ಕರ್ನಾಟಕ ಸಂಘದ ಕಾರ್ಯದರ್ಶಿ ಕೀರ್ತಿ ಗಾಂವಕರ್, ನಗರಸಭಾ ಸದಸ್ಯರುಗಳಾದ ಮೋಹನ್ ಹಲವಾಯಿ, ಅನಿಲ್ ನಾಯ್ಕರ್, ನಗರ ಸಭೆಯ ಮಾಜಿ ಉಪಾಧ್ಯಕ್ಷ ಅನಿಲ್ ದಂಡಗಲ್, ಪ್ರಮುಖರಾದ ಡಾ ಬಿ. ಪಿ. ಮಹೇಂದ್ರಕುಮಾರ್, ಭೀಮಾಶಂಕರ್ ಅಜನಾಳ, ರುದ್ರಪ್ಪ ಮುರಗೋಡ, ಫಿರೋಜ್ ಫಿರ್ಜಾದೆ, ಫ್ರಾನ್ಸಿಸ್ ಮಸ್ಕರಿನಸ್ , ಕೃಷ್ಣಾನಂದ ಗುನಗಿ ಮುಂತಾದವರಿದ್ದರು.