Slide
Slide
Slide
previous arrow
next arrow

ಜಲ‌ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಭೂಮಿ ಪೂಜೆ

300x250 AD

ಹಳಿಯಾಳ : ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಳಿಯಾಳ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ತಾಲೂಕಿನ ದುಸಗಿ ಗ್ರಾಮದಲ್ಲಿ 434 ಜನ ವಸತಿ ಮನೆಗಳಿಗೆ ಪೈಪ್ ಲೈನ್ ಅಳವಡಿಸಿ ನಳ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಪೂರೈಸುವ ಕಾಮಗಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆ ಶನಿವಾರ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸಲು ಮೊದಲ ಆಧ್ಯತೆಯನ್ನು ನೀಡಲಾಗುತ್ತದೆ. ಈ ಪ್ರದೇಶದ ಜನತೆಯ ಕುಡಿಯುವ ನೀರಿನ ಸಮಸ್ಯೆಯನ್ನು ಮನಗಂಡು ಜಲ ಜೀವನ್ ಮಿಷನ್ ಯೋಜನೆಯಡಿ‌ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯಾದ ನನ್ನ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು, ಕಾಮಗಾರಿಗಳನ್ನು ತರಲಾಗಿದೆ ಎಂದರು.

300x250 AD

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top