ದಾಂಡೇಲಿ : ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸದಿರುವುದಕ್ಕೆ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿ ಮಾತನಾಡಿದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಅವರು 2018 ರಲ್ಲೆ ಜಿ+2 ಆಶ್ರಯ ಮನೆಗಳು ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿತ್ತು. ಆದರೆ ಈವರೇಗೆ ಮನೆ ನಿರ್ಮಾಣ ಕಾರ್ಯ ಮುಗಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಈ ಬಗ್ಗೆ ಯಾವುದೇ ರೀತಿಯ ಕ್ರಮವನ್ನು ಕೈಗೊಳ್ಳಲಾಗಿಲ್ಲ. ಜಿ+2 ಆಶ್ರಯ ಮನೆ ವಿತರಣೆ ಮಾಡದ ಹಿನ್ನಲೆಯಲ್ಲಿ ಬರಲಿರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತಿರುವ ಬಗ್ಗೆ ಈಗಾಗಲೆ ಚುನಾವಣಾ ಆಯುಕ್ತರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದರು.