Slide
Slide
Slide
previous arrow
next arrow

ಸುವರ್ಣ ಸಾಧಕ ಪ್ರಶಸ್ತಿಗೆ ಭಾಜನರಾದ ಅನಂತಮೂರ್ತಿ

300x250 AD

ಶಿರಸಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನೇಕ ಸಾಮಾಜಿಕ‌ ಕಾರ್ಯಗಳನ್ನು ಮಾಡುತ್ತಿರುವ ಶಿರಸಿಯ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಕೊಡಲ್ಪಡುವ ಸುವರ್ಣ ಸಾಧಕ‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಪ್ರದಾನ ಸಮಾರಂಭವು ಫೆ. 10 ರಂದು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‌ನಲ್ಲಿ ನಡೆಯಲಿದ್ದು, ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಮಾಧ್ಯಮ ಸಂಸ್ಥೆ ಎಂದೇ ಖ್ಯಾತಿಯ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ನೇರ-ದಿಟ್ಟ- ನಿರಂತರ ಸುದ್ದಿಯನ್ನು ಬಿತ್ತರಿಸುವುದರೊಂದಿಗೆ ಸಾಮಾಜಿಕ ಕಳಕಳಿ ಬಿಂಬಿಸುವ ಹಲವು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ವನ್ಯಜೀವಿ ಸಂರಕ್ಷಣಾ ಅಭಿಯಾನ, ಕರ್ನಾಟಕದ 7 ಅದ್ಭುತಗಳು, ರೈತರತ್ನ, ಉಜ್ವಲ, ಸುವರ್ಣ ಶಿಕ್ಷಣ, ಎಮಿನೆಂಟ್ ಇಂಜಿನಿಯರಿಂಗ್, ಹೆಲ್ತ್ ಕೇರ್ ಎಕ್ಸಲೆನ್ಸ್, ಬೆಹರೀನ್ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕಾರ ಸೇರಿದಂತೆ ಹಲವಾರು ಜನಪರ ಹಾಗೂ ಸಮಾಜಮುಖಿ ಅಭಿಯಾನಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

300x250 AD

ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಗೈದರೂ ಎಲೆಮರೆಕಾಯಿಯಂತಿರುವ ಸಾಧಕರನ್ನು ಗುರುತಿಸಿ ಪುರಸ್ಕರಿಸುವ ಕೆಲಸವನ್ನು ಏಷ್ಯಾನೆಟ್ ಸುವರ್ಣನ್ಯೂಸ್ ಹಲವು ವರ್ಷಗಳಿಂದ ಮಾಡುತ್ತಾ ಬಂದಿದೆ. ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿನ ಅಪರೂಪದ ಸಾಧನೆಗೈದು ರಾಜ್ಯದ ಹೆಗ್ಗಳಿಕೆಯನ್ನು ಇಮ್ಮಡಿಗೊಳಿಸಿರುವ ಸಾಧಕರನ್ನು ಗುರುತಿಸಿ ಸುವರ್ಣ ಸಾಧಕರು ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Share This
300x250 AD
300x250 AD
300x250 AD
Back to top