ಕಾರವಾರ: ಕರ್ನಾಟಕ ಸರ್ಕಾರ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಿಸಿಪಿಎನ್ಡಿಟಿ ಕೋಶ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆಯ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಇಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಮ್ ರೇಷ್ಮಾ ಜೆ ರೋಡ್ರಿಗಸ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ ಜಿ.ಎನ್., ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಹೆಚ್.ಹೆಚ್. ಕುಕನೂರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಎನ್. ಜಾಂಬಾವಳಿಕರ್, ಸಮಾಜಿಕ ಕಾರ್ಯಕರ್ತೆ ಹಾಗೂ ಜಿಲ್ಲಾ ಪಿಸಿಪಿಎನ್ಡಿಟಿ ಸಲಹಾ ಸಮಿತಿ ಸದಸ್ಯೆ ಪುಷ್ಪಾ ಜಿ ನಾಯ್ಕ ಮತ್ತಿತರರು ಭಾಗವಹಿಸಲಿದ್ದಾರೆ.