ಸಿದ್ದಾಪುರ: ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಕಂದಾಯ ಇಲಾಖೆ, ಪೋಲೀಸ್ ಇಲಾಖೆ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಸಿದ್ದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಿ.ಡಿ.ಪಿ.ಒ. ಕಛೇರಿಯಲ್ಲಿ ಜೀತ ಪದ್ದತಿಯ ನಿರ್ಮೂಲನಾ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ತಹಶೀಲ್ದಾರರಾದ ವಿಶ್ವಜೀತ ಮೇಹತಾ, ವಂಶಪಾರಂಪರ್ಯವಾಗಿ ಈ ಪದ್ಧತಿ ರೂಢಿಯಲ್ಲಿತ್ತು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕೆ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಕರ್ತವ್ಯ ನಿರ್ವಹಿಸುವುದು ಅವಶ್ಯಕವಾಗಿರುತ್ತದೆ. ಗ್ರಾಮ ಆಡಳಿತಾಧಿಕಾರಿಗಳಾದ ಹರೀಶ ನಾಯ್ಕ ರವರು ಜೀತ ಪದ್ಧತಿಯ ನಿರ್ಮೂಲನೆ ಕುರಿತು ವಿಶೇಷ ಉಪನ್ಯಾಸ ನೀಡಿದ್ದರು.
ಕಾರ್ಯಕ್ರಮದ ಅತಿಥಿಗಳಾಗಿ ವಕೀಲ ಸಂಘದ ಉಪಾಧ್ಯಕ್ಷರಾದ ಎನ್.ಎಮ್. ನಾಯ್ಕ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಾದ ಜೆ.ಆರ್.ನಾಯ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಡಿ.ಪಿ.ಓ ಶ್ರೀಮತಿ ಪೂರ್ಣಿಮಾ ವಹಿಸಿದ್ದರು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸಾವಿತ್ರಿ ಗೌಡ ಪ್ರಾರ್ಥನೆ ಮಾಡಿದ್ದರು. ಹಿರಿಯ ಮೇಲ್ವಿಚಾರಕರಾದ ಶ್ರೀಮತಿ ನೀಲಮ್ಮ ಜೆ.ನಾಯ್ಕ ಸ್ವಾಗತಿಸಿದರೆ, ನಿರೂಪಣೆಯನ್ನು ಶ್ರೀಮತಿ ಗೀತಾ ಕೆಲ್ಸಿ ಮಾಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು , ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿಯ ಕಾರ್ಯಕರ್ತೆಯರು , ತಾಲೂಕು ಕಾನೂನು ಸೇವಾ ಸಮಿತಿಗಳ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.