ಶಿರಸಿ: ತಾಲೂಕಿನ ಆಜಾದ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೧೦ರಂದು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ. ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಇವರ ಸಹಯೋಗದಲ್ಲಿ ನಡೆದ ಆರೋಗ್ಯ ಶಿಕ್ಷಣ ಮತ್ತು ಔಷಧಗಳ ಬಗ್ಗೆ ಉಪನ್ಯಾಸ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಸಿಯ ಕಪಿಲಾ ಮೆಡಿಕಲ್ ಏಜೆನ್ಸಿ ಮಾಲೀಕರಾದ ಚಂದ್ರಶೇಖರ್ ಹೆಗಡೆ ದೀಪ ಬೆಳಗಿಸಿ, ಸಸ್ಯಕ್ಕೆ ನೀರು ಹಾಕಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸ.ಹಿ.ಪ್ರಾ ಶಾಲೆ ಆಜಾದ್ ನಗರದ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಗೀತಾ ಆಚಾರಿ ಮತ್ತು ಶಿರಸಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಧರ್ ಎಸ್ ನಾಯ್ಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ, ಜಿಲ್ಲಾ ಶಾಖೆ: ಉತ್ತರ ಕನ್ನಡದ ಅಧ್ಯಕ್ಷರಾದ ಮಹೇಶ್ ಡಿ. ನಾಯಕ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ತೋನ್ಸೆ ಮಾತನಾಡಿ ಆರೋಗ್ಯ ಮತ್ತು ಪರಿಸರದ ಸ್ವಚ್ಛತೆ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡಿದರು. ಶ್ರೀಮತಿ ಗಿರಿಜಾ ಈಶ್ವರ ಹೆಗಡೆ ಐಸಿಟಿಸಿ ಕೌನ್ಸಿಲರ್ ಶಾಲಾ ಮಕ್ಕಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಕಾರ್ಯಗಾರ ನಡೆಸಿದರು. ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ ಉಪಾಧ್ಯಕ್ಷರಾದ ಮಹೇಶ್ ಗಾಳಿಮನೆ ಜೀವನಶೈಲಿ ಮತ್ತು ಆಹಾರ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ಗ್ರೀನ್ ಕೇರ್ ಸಂಸ್ಥೆಯ ಸದಸ್ಯರಾದ ಯಶವಂತ್ ನಾಯ್ಕ, B.I.E.R.T. ಪಿ.ಕೆ ದೊಡ್ಮನಿ, ಸ.ಹಿ.ಪ್ರಾ. ಶಾಲೆ ಆಜಾದ್ ನಗರದ ಮುಖ್ಯೋಧ್ಯಾಪಕರಾದ ತೇಲು ಭೋರ್ಕರ್, ಶಾಲಾ ಎಸ್. ಡಿ.ಎಂ.ಸಿ.ಸದಸ್ಯರಾದ ಶ್ರೀಮತಿ ದೀಪಾ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಕೋ ಕೇರ್ ನಿರ್ದೇಶಕರಾದ ಜಗದೀಶ್ ನಾಯಕ, ಜೆ.ಕೆ. ಎಂಟರ್ಪ್ರೈಸಸ್ ವ್ಯವಸ್ಥಾಪಕರಾದ ಮಹಾಂತೇಶ್ ಪ್ರಭುದೇವ್ ಅವರು ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕರು, ಪಾಲಕರು, ಉಪಸ್ಥಿತರಿದ್ದರು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಮತ್ತು ಮುಖ್ಯೋಪಾಧ್ಯಾಯರಿಗೆ ಸಂಸ್ಥೆಯವರು ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಹಸ್ತಾಂತರಿಸಿದರು. ರಾಜೇಶ್ ವರ್ಣೇಕರ್ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಉಪಯೋಗಿಸುವ ಬಗ್ಗೆ ಮತ್ತು ಅದರ ಉಪಯೋಗದ ಬಗ್ಗೆ ತಿಳಿಸಿದರು. ಇಕೋ ಕೇರ್ ಅಧ್ಯಕ್ಷರಾದ ಸುನಿಲ್ ಭೋವಿ ಸ್ವಾಗತಿಸಿ, ಔಷಧ ಮಾರಾಟ ಪ್ರತಿನಿಧಿಗಳ ಸಂಘ, ಶಿರಸಿ ಘಟಕ ಕಾರ್ಯದರ್ಶಿ ರಮೇಶ್ ಬಿ ನಾಯ್ಕ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲಾ ಶಿಕ್ಷಕರಾದ ಶ್ರೀಮತಿ ಉಷಾ ರಾಣಿ ವಂದನಾರ್ಪಣೆಯನ್ನು ನೆರವೇರಿಸಿದರು.