ದಾಂಡೇಲಿ : ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದಾಂಡೇಲಿ ನಗರ ಹಾಗೂ ತಾಲೂಕಿಗೆ ಸಂಬಂಧಪಟ್ಟಂತೆ ಇರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಸೋಮವಾರ ನಗರದಲ್ಲಿ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದರು.
ಜಿ+2 ಆಶ್ರಯ ಮನೆಗಳ ಹಂಚಿಕೆ, ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಿಕೆ, ಸಾರ್ವಜನಿಕ ಆಸ್ಪತ್ರೆಯನ್ನು ತಾಲೂಕಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಿಕೆ, ದಾಂಡೇಲಿ ತಾಲೂಕಿಗೆ ತಾಲೂಕು ಮಟ್ಟದ ವಿವಿಧ ಕಚೇರಿಗಳನ್ನು ಪ್ರಾರಂಭಿಸುವಂತೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಅಕ್ರಮ್ ಖಾನ್ ತಿಳಿಸಿದ್ದಾರೆ.