ಶಿರಸಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯನ್ನು ತಾಲೂಕಿನ ಪಡಂಬೈಲ್ನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸೋಮವಾರ ಪ್ರತಿ ಮನೆಗೆ ನೀರು ಪೂರೈಕೆಗೆ ಚಾಲನೆ ನೀಡಲಾಯಿತು.
ಕುಳವೆ ಗ್ರಾಪಂ ವ್ಯಾಪ್ತಿಯ ಪಡಂಬೈಲ್ನಲ್ಲಿ 21 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಮನೆಗೂ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೂಲಕ ಜಲಜೀವನ ಮಿಷನ್ (ಮನೆ ಮನೆಗೆ ಗಂಗೆ) ಯೋಜನೆಗೆ ಕಳೆದ 2 ವರ್ಷದ ಹಿಂದೆ ಅನುಷ್ಠಾನಗೊಳಿಸಲಾಗಿತ್ತು. ನೀರಿನ ಮೂಲಕ, ಪೈಪ್ಲೈನ್, ನಳ ಜೋಡಣೆ ಕಾರ್ಯವನ್ನು ಪೂರ್ಣಗೊಳಿಸಿ, ಸುಮಾರು 65 ಮನೆಗೆ ನೀರು ಸರಬರಾಜಿಗೆ ಸೋಮವಾರ ಚಾಲನೆಗೊಳಿಸಲಾಯಿತು.
ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾಗಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿಯೂ ಹಂತ ಹಂತವಾಗಿ ಅನುಷ್ಠಾನಗೊಳ್ಳುತ್ತಿದೆ. ಕುಳವೆ ಗ್ರಾಪಂ ವ್ಯಾಪ್ತಿಯ ಪಡಂಬೈಲ್ನಲ್ಲಿಯೂ ಕಾಮಗಾರಿ ಪೂರ್ಣಗೊಂಡು ಸೋಮವಾರದಿಂದ ಮನೆ ಮನೆಗೆ ನೀರು ತಲುಪಿಸುವ ಕಾರ್ಯ ಮಾಡಲಾಗಿದೆ ಎಂದು ಕುಳವೆ ಗ್ರಾಪಂ ಉಪಾಧ್ಯಕ್ಷ ಶ್ರೀನಾಥ ಶೆಟ್ಟಿ ತಿಳಿಸಿದರು.
ಕೋಟ್:
ಜೆಜೆಎಂ ಕಾಮಗಾರಿಯು ಪಡಂಬೈಲ್ನಲ್ಲಿ ಶಿಸ್ತುಬದ್ಧವಾಗಿ ನಡೆದಿದೆ. ಪ್ರತಿ ಮನೆಗೆ ನೀರು ತಲುಪಿದ ನಂತರ ನೀರು ಪೂರೈಕೆಗೆ ಚಾಲನೆ ನೀಡಲಾಗಿದೆ. ವಾಟರ್ಮೆನ್ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ದಿನ ನೀರು ಪೂರೈಕೆ ಮಾಡಲಾಗುತ್ತದೆ.—ಶ್ರೀನಾಥ ಶೆಟ್ಟಿ, ಕುಳವೆ ಗ್ರಾಪಂ ಉಪಾಧ್ಯಕ್ಷ