ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಗ್ರಾಪಂ ಹಾರ್ಸಿಕಟ್ಟಾ, ಸಮಾಜ ಕಲ್ಯಾಣ ಇಲಾಖೆ, ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ, ಮಹಿಳಾ ಸಂಘಗಳ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ವಾಹನದೊಂದಿಗೆ ಸೋಮವಾರ ಜರುಗಿತು.
ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ಹನುಮಕ್ಕ ರಂಗಪ್ಪ ಭೋವಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ ಗಜಾನನೋತ್ಸವ ಸಮಿತಿಯಲ್ಲಿ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸ್ಥಳೀಯ ಇಂದಿರಾಗಾಂಧಿ ವಸತಿ ಶಾಲೆಯ ಶಿಕ್ಷಕ ಜಾವೇದ್ ಎಚ್.ಎಸ್.ಸಂವಿಧಾನದ ಕುರಿತು ಉಪನ್ಯಾಸ ನೀಡಿದರು. ಗ್ರಾಪಂ ಪಿಡಿಒ ರಾಜೇಶ ನಾಯ್ಕ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ, ವರ್ತಕ ಅನಂತ ಶಾನಭಾಗ ಸಂವಿಧಾನದ ಕುರಿತು ಮಾತನಾಡಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಂಡೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಗ್ರಾಪಂ ಸದಸ್ಯರಾದ ವಿದ್ಯಾ ನಾಯ್ಕ, ವಿಶಾಲಾಕ್ಷಿ ಹಸಲರ್, ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಅಣ್ಣಪ್ಪ ಬಾಳೇಗದ್ದೆ ಇತರರಿದ್ದರು. ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯ ಮಕ್ಕಳಿಗೆ ಆಯೋಜಿಸಿದ್ದ ವಿವಿಧಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಸುಧಾಕರ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ಮುಕ್ತಾ ಭಟ್ಟ ಕಾರ್ಯಕ್ರಮ ನಿರ್ವಹಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ಡೊಳ್ಳುಕುಣಿತ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದ ಪೂರ್ವದಲ್ಲಿ ನಡದ ಸಂವಿಧಾನ ಜಾಗೃತಿ ಜಾಥಾದಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳು, ಶಿಕ್ಷಕರು, ಸಿಬ್ಬಂದಿಗಳು, ಗ್ರಾಪಂ ಅಧ್ಯಕ್ಷರಯ, ಸದಸ್ಯರು, ಸಿಬ್ಬಂದಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಮಹಿಳಾ ಸಂಘಗಳ ಸದಸ್ಯರು ಪೂರ್ಣಕುಂಭದೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.