Slide
Slide
Slide
previous arrow
next arrow

ವಿದ್ಯಾರ್ಥಿಗಳ ವ್ಯಾವಹಾರಿಕ ಕೌಶಲ್ಯ ಅನಾವರಣಗೊಳಿಸಿದ ‘ಮಕ್ಕಳ ಸಂತೆ’

300x250 AD

ಭಟ್ಕಳ:ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ಮಕ್ಕಳ ಸಂತೆಯನ್ನು ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಮಕ್ಕಳ ಸಂತೆ ಗಮನ ಸೆಳೆಯಿತು.

ಮುಠ್ಠಳ್ಳಿಯಲ್ಲಿ ಶಾಲೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಸಂತೆಗೆ ಶಾಲಾ
ಮಕ್ಕಳಿಗೆ ವ್ಯಾವಹಾರಿಕ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸಂತೆಯಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ತರಕಾರಿಗಳು ಹಣ್ಣು ಹಾಗೂ ಇತರ ದಿನಬಳಕೆ ವಸ್ತುಗಳನ್ನು ಮಾರಾಟ ಮಾಡಿ ಲಾಭ ,ನಷ್ಟದ ಪರಿಕಲ್ಪನೆ ಮತ್ತು ಸಾರ್ವಜನಿಕರೊಂದಿಗೆ ವ್ಯವಹರಿಸುವ ವಿಧಾನದ ಬಗ್ಗೆ  ತಿಳಿದುಕೊಂಡರು.
ವಾರದ ಸಂತೆಯೊಳಗಿನ ಎಲ್ಲಾ ಅಂಶಗಳು ಮಕ್ಕಳ ಸಂತೆಯಲ್ಲಿ ಸಮ್ಮಿಳಿತವಾಗಿತ್ತು. ಸುಮ್ಮನೆ ಕುತೂಹಲಕ್ಕೆಂದು ಬಂದ ಸಾಕಷ್ಟು ಗ್ರಾಮದ ನಿವಾಸಿಗಳು ಬ್ಯಾಗ್ ಹಿಡಿದು ಮಕ್ಕಳೊಂದಿಗೆ ಚರ್ಚಿಸಿ ವ್ಯಾಪಾರ ಮಾಡುವ ಮೂಲಕ ವಾರದ ಸಂತೆಯನ್ನು ಮಕ್ಕಳ ಸಂತೆಯಲ್ಲೆ ಮುಗಿಸುವ ಧಾವಂತ ತೋರಿದ್ದು ವಿಶೇಷವಾಗಿತ್ತು.

300x250 AD

ಮಕ್ಕಳ ಸಂತೆ ಯಶಸ್ವಿಯಾಗಲು ಸಹಕರಿಸಿದಂತಹ ಸರ್ವರಿಗೂ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು  ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಚಂದಾವರ,ಪಂಚಾಯತ್ ಕಾರ್ಯದರ್ಶಿ ಮಂಜುನಾಥ ಚಿಕ್ಕನಮನೆ, ಸಿ ಆರ್ ಪಿ ಜಯಶ್ರೀ ಆಚಾರಿ,ಎಸ್ ಡಿ ಎಂ ಸಿ ಅಧ್ಯಕ್ಷ ಅನಂತ ನಾಯ್ಕ್, ಎಸ್ ಡಿ ಎಮ್ ಸಿ ಉಪಾಧ್ಯಕ್ಷೆ ಯಶೋಧಾ ನಾಯ್ಕ್, ಪಂಚಾಯತ್ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ್ ಮಕ್ಕಳ ಪಾಲಕ ಪೋಷಕರು,‌ ಸೇರಿದಂತೆ ಮುಂತಾದವರು ಉಪಸ್ಥಿತಿ ಇದ್ದರು.

Share This
300x250 AD
300x250 AD
300x250 AD
Back to top