Slide
Slide
Slide
previous arrow
next arrow

ಕೆಎಫ್‌ಡಿ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯ: ಮೆಹತಾ

300x250 AD

ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು ಈಗಾಗಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಈ ಕುರಿತು ಜಾಗೃತಿ ಮೂಡಿಸಲು ಸೋಮವಾರ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಹಸೀಲ್ದಾರ ವಿಶ್ವಜಿತ್ ಮೆಹತಾ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ತಹಸೀಲ್ದಾರ ವಿಶ್ವಜಿತ್ ಮೆಹತಾ ಮಾತನಾಡಿ, ಈ ಖಾಯಿಲೆಯ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿರುವುದು ಅವಶ್ಯಕತೆ ಇದೆ.ಇದಕ್ಕೆ ಎಲ್ಲ ಇಲಾಖೆಯವರು ಕೈಜೋಡಿಸಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರಿಗೆ ತಿಳುವಳಿಕೆ ಮೂಡಿಸಬೇಕಾಗಿದೆ. ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಕೊಡುವ ವಿಷಯದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದಕ್ಕೆ ಜನರಿಗೆ ತಿಳುವಳಿಕೆ ನೀಡಬೆಕು ಎಂದು ಸೂಚಿಸಿದರು.

300x250 AD

ತಾಲೂಕು ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ ನಾಯ್ಕ ಮಾತನಾಡಿ ಕಳೆದ ಐದು ವರ್ಷದಿಂದ ಮಂಗನಕಾಯಿಲೆ ತಾಲೂಕಿನಲ್ಲಿ ಕಾಣಿಸಿಕೊಳ್ಳುತ್ತಿದೆ ಸಾಮಾನ್ಯವಾಗಿ ಮಾರ್ಚ ತಿಂಗಳಲ್ಲಿ ಕಾಣಿಸಿಕೊಳ್ಳಬೇಕಾದ ಕಾಯಿಲೆ ಈ ವರ್ಷ ಜನವರಿಯಲ್ಲೆ ಕಾಣಿಸಿಕೊಂಡಿದೆ. ಕೊರ್ಲಕೈ ಗ್ರಾಪಂ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಇವೆ ಉಳಿದಂತೆ ಹಲಗೇರಿ,ಕೊಂಡ್ಲಿ, ಹಸರಗೋಡು, ಸೋವಿನಕೊಪ್ಪ ಭಾಗದಲ್ಲಿ ಪ್ರಕರಣಗಳಿವೆ ಮುಂದಿನ ದಿನಗಳಲ್ಲಿ ತಾಲೂಕಿನ ಬೇರೆ ಬೇರೆ ಭಾಗದಲ್ಲೂ ಈ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ . ನಿಯಂತ್ರಣಕ್ಕೆ ಅವಶ್ಯಕ ಕ್ರಮವನ್ನು ತೆಗದುಕೊಳ್ಳಲಾಗುತ್ತಿದೆ ಜನರು ಸಹಕರಿಸಬೇಕಾದ ಅವಶ್ಯಕತೆ ಇದೆ. ತಾಲೂಕಿನಲ್ಲಿ 43 ಪ್ರಕರಣ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮೂವರು ಮಣಿಪಾಲ್ ಆಸ್ಪತ್ರೆಯಲ್ಲಿ, ಮೂವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಉಳಿದವರು ಗುಣಮುಖರಾಗಿದ್ದಾರೆ. ಈಗಾಗಲೇ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಇಪಿ ತೈಲ ನೀಡಲಾಗಿದೆ. ಹೆಚ್ಚುವರಿಯಾಗಿ 100 ಎಂಎಲ್‌ನ 5000ಬಾಟಲಿ ಸಂಗ್ರಹಿಸಿಡಲಾಗಿದೆ .ಕೋರ್ಲಕೈ ಭಾಗದಲ್ಲಿ ಹೆಚ್ಚಾಗಿ ತೈಲ ನೀಡಲಾಗಿದೆ. ಉಣ್ಣೆ ನಿಯಂತ್ರಣಕ್ಕೆ ಮಿಥಾಲಿನ್ ಪೌಡರ್ ಸಿಂಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಪಂ ಪಿಡಿಒ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top