Slide
Slide
Slide
previous arrow
next arrow

ಚರ್ಮ ವಸ್ತು ತರಬೇತಿ: ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ

300x250 AD

ದಾಂಡೇಲಿ: ಸಮಾಜ ಕಲ್ಯಾಣ ಇಲಾಖೆ, ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಆಶ್ರಯದಡಿ ದಾಂಡೇಲಿ ನಗರಸಭೆಯ ಸಹಕಾರದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ 60 ದಿನಗಳ ಚರ್ಮ ವಸ್ತುಗಳ ಹೊಲಿಗೆ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಹೊಲಿಗೆ ಯಂತ್ರದ ಜೊತೆಗೆ‌ ಸಂಬಂಧಿಸಿದ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯಕ್ರಮವನ್ನು ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ನಗರಸಭೆಯ ವ್ಯವಸ್ಥಾಪಕರಾದ ಪರಶುರಾಮ್ ಶಿಂಧೆ, ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ತರಬೇತಿ ಕಾರ್ಯಕ್ರಮವು ಅತ್ಯುತ್ತಮವಾದ ಕಾರ್ಯಕ್ರಮವಾಗಿದೆ. ಶಿಬಿರಾರ್ಥಿಗಳು ಈ ತರಬೇತಿಯ ಲಾಭವನ್ನು ಪಡೆದು ಆರ್ಥಿಕ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು.

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರಾದ ಟಿ.ಮಲಿಕಾರ್ಜುನ್, ಮಾತನಾಡಿ ನಿಗಮವು ಈ ರೀತಿಯ ಜನಪದ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ. ಶಾಸಕ ಆರ್.ವಿ.ದೇಶಪಾಂಡೆ ಮಾರ್ಗದರ್ಶನದೊಂದಿಗೆ ನಗರಸಭೆಯ ಸಹಕಾರದಲ್ಲಿ 60 ದಿನಗಳ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿದೆ. 30 ಶಿಬಿರಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದು, ಪ್ರತಿ ಶಿಬಿರಾರ್ಥಿಗೆ ರೂ: 6‌ ಸಾವಿರದಂತೆ ಗೌರವಧನವನ್ನು ನೀಡಲಾಗುತ್ತದೆ.ಇಂದು  ಈ ಎಲ್ಲಾ ಶಿಬಿರಾರ್ಥಿಗಳಿಗೆ ಹೊಲಿಗೆ ಯಂತ್ರವನ್ನು ಮತ್ತು ಅದಕ್ಕೆ ಸಂಬಂಧಿಸಿದ ಕಿಟ್ ಗಳನ್ನು ಉಚಿತವಾಗಿ ನಿಗಮದವತಿಯಿಂದ ನೀಡಲಾಗುತ್ತದೆ. ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಬಿರಾರ್ಥಿಗಳು ಜೀವನದಲ್ಲಿ ಉನ್ನತಿಯನ್ನು ಸಾಧಿಸಬೇಕೆಂದು ಕರೆ ನೀಡಿದರು.

300x250 AD

ಈ ಸಂದರ್ಭದಲ್ಲಿ ಡೋಹರ್ ಕಕ್ಕಯ್ಯ ಸಮಾಜದ ರಾಜ್ಯಾಧ್ಯಕ್ಷರಾದ ಸಂತೋಷ್ ಸವಣೂರು, ಪ್ರಮುಖರಾದ ಅವಿನಾಶ್ ಘೋಡ್ಕೆ, ಸತೀಶ್ ನಾಯ್ಕ, ರಾಜಶೇಖರ್ ನಿಂಬಾಳ್ಕರ್, ಪೂವಪ್ಪ ಕಾನಪೇಟೆ, ರವಿ, ರಮೇಶ ‌ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top