ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಮುಗಿಸಿ, ತ್ವರಿತಗತಿಯಲ್ಲಿ ಆಶ್ರಯ ಮನೆಗಳನ್ನು ವಿತರಿಸದಿದ್ದಲ್ಲಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಲಾಗಿದೆ. ಇದರ ಹೊರತಾಗಿಯೂ ಮುಂದಿನ ವಾರದಿಂದ ದಾಂಡೇಲಿ ನಗರಸಭೆ ಮುಂಭಾಗದಲ್ಲಿ ಆಶ್ರಯ ಮನೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದೆಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಹೇಳಿದರು.
ಅವರು ನಗರದ ಅಂಬೇವಾಡಿಯಲ್ಲಿ ಜಿ+2 ಆಶ್ರಯ ಮನೆ ಫಲಾನುಭವಿಗಳು ಹಾಗೂ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು,ಸದಸ್ಯರು ಮತ್ತು ಸದಸ್ಯರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮ ಜೊತೆ ಮಾತನಾಡುತ್ತಾ ಹೇಳಿದರು.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಜಿ+2 ಆಶ್ರಯ ಮನೆ ಫಲಾನುಭವಿಗಳು ಉಪಸ್ಥಿತರಿದ್ದರು.