ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ನಡೆಸುತ್ತಿವೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳ ದಾಳಿ ಮಾಡಿವೆ. ಸದ್ಯ ಜೇನುಹುಳುಗಳ ದಾಳಿ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆಗೆ ನಿರ್ಬಂಧ ಹೇರಿದೆ. ಬಿಸಗೋಡ ಕ್ರಾಸ್ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದ್ದು, ಏ.14ರಿಂದ ಅನಿರ್ದಿಷ್ಟ ಕಾಲದವರೆಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಎಂದು ಬ್ಯಾನರ್ ಹಾಕಲಾಗಿದೆ.