ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಿಗೆ , ಚುನಾವಣಾ ವೀಕ್ಷಕ ರಾಜೀವ್ ರತನ್ ಅವರ ಸಮ್ಮುಖದಲ್ಲಿ ಸೋಮವಾರ ಚಿಹ್ನೆಗಳನ್ನು ಹಂಚಿಕೆ ಮಾಡಲಾಯಿತು.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಪಕ್ಷದ ಚಿಹ್ನೆಯಾದ ಕೈ ಗುರುತು, ಭಾರತೀಯ ಜನತಾ ಪಾರ್ಟಿಯ ಕಾಗೇರಿ ವಿಶ್ವೇಶ್ವರ ಹೆಗಡೆ ಅವರಿಗೆ ಪಕ್ಷದ ಚಿಹ್ನೆಯಾದ ಕಮಲದ ಗುರುತು, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆಗೆ ಬ್ಯಾಟ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್ಗೆ ಆಟೋ ರಿಕ್ಷಾ, ಕರ್ನಾಟಕ ರಾಷ್ಟ್ರ ಸಮಿತಿಯ ವಿನಾಯಕ ನಾಯ್ಕ್ ಗೆ ಬ್ಯಾಟರಿ ಟಾರ್ಚ್, ಪಕ್ಷೇತರ ಅಭ್ಯರ್ಥಿಗಳಾದ ಅರವಿಂದ ಗೌಡಗೆ ಮೇಜು, ಅವಿನಾಶ್ ನಾರಾಯಣ ಪಾಟೀಲ್ಗೆ ಹಡಗು, ಕೃಷ್ಣ ಹನುಮಂತಪ್ಪ ಬಳೆಗಾರಗೆ ಪ್ರಶರ್ ಕುಕ್ಕರ್, ಚಿದಾನಂದ ಹನುಮಂತಪ್ಪ ಹರಿಜನ ಗೆ ಕಲ್ಲಂಗಡಿ ಹಣ್ಣು, ನಾಗರಾಜ ಅನಂತ ಶಿರಾಲಿಗೆ ವಜ್ರ, ನಿರಂಜನ್ ಉದಯಸಿನ್ಹಾ ಸರ್ದೇಸಾಯಿಗೆ ಮಡಿಕೆ, ಕೃಷ್ಣಾಜಿ ಪಾಟೀಲ್ಗೆ ಟ್ರಕ್, ರಾಜಶೇಖರ ಶಂಕರ ಹಿಂಡಲಗಿಗೆ ಡೀಸೆಲ್ ಪಂಪ್ ಚಿಹ್ನೆಗಳನ್ನು ಹಂಚಿಕೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮತ್ತು ಅವರ ಪ್ರತಿನಿಧಿಗಳು ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಉಪಸ್ಥಿತರಿದ್ದರು.