Slide
Slide
Slide
previous arrow
next arrow

ಪರಿಸರದಲ್ಲಿ ಸ್ವಚ್ಛತೆ ಕಾಪಾಡಿ, ಮಲೇರಿಯಾದಿಂದ ದೂರವಿರಿ: ಜಿಲ್ಲಾಧಿಕಾರಿ

300x250 AD

ಕಾರವಾರ: ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಮಲೇರಿಯಾ ರೋಗದಿಂದ ದೂರವಿರಲು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಾಪೂಜಿ/ಛತ್ರಪತಿ/ಸರ್ಕಾರಿ ಜಿ.ಎನ್.ಎಮ್. ನರ್ಸಿಂಗ್ ವಿಜ್ಞಾನ ವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ‘ಹೆಚ್ಚು ಸಮಾನತೆಯ ಜಗತ್ತಿನ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸೋಣ’ ಎಂಬ ಘೋಷವಾಕ್ಯದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಲೇರಿಯಾ ರೋಗದ ಜಾಗೃತಿ ಎಲ್ಲಾ ಸಾರ್ವಜನಿಕರಲ್ಲಿ ಹಾಗೂ ವಿಶೇಷವಾಗಿ ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಲೇರಿಯಾ ರೋಗ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2030ರ ವೇಳೆಗೆ ಮಲೇರಿಯಾ ಮುಕ್ತ ದೇಶ ಎಂಬ ಧ್ಯೇಯವಾಕ್ಯದೊಂದಿಗೆ ಮಲೇರಿಯಾ ನಿರ್ಮೂಲನೆ ಮಾಡಲು ಎಲ್ಲರೂ ಕಾರ್ಯಬದ್ದರಾಗೋಣ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ಒಂದೊಂದು ಘೋಷವಾಕ್ಯದೊಂದಿಗೆ ಏ.25 ರಂದು ವಿಶ್ವ ಮಲೇರಿಯಾ ದಿನಾಚರಣೆ ಆಚರಿಸಲಾಗುತ್ತಿದೆ. ಈ ವರ್ಷ ಹೆಚ್ಚು ಸಮಾನತೆಯ ಜಗತ್ತಿನ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸೋಣ ಎಂಬ ಘೋಷವಾಕ್ಯದೊಂದಿಗೆ ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2030ರ ವೇಳೆಗೆ ದೇಶದಲ್ಲಿ ಮಲೇರಿಯಾವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ 2018 ರಿಂದ ಮಲೇರಿಯಾ ರೋಗ ಪ್ರಕರಣಗಳು ವರದಿಯಾಗಿಲ್ಲ. ಇದೇ ಸ್ಥಿತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಮಲೇರಿಯಾ ಮುಕ್ತ ದೇಶವನ್ನಾಗಿಸಲು ಜಿಲ್ಲೆಯ ಪಾಲು ಮಹತ್ವದಾಗಿರುತ್ತದೆ ಎಂದರು.
ಜಾಥಾವು ಡಾ.ಪಿಕಳೆ ರಸ್ತೆ, ಸುಭಾಷ್ ಚಂದ್ರ ಬೋಸ ವೃತ್ತ, ಸವಿತಾ ಹೋಟೆಲ್ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಮುಕ್ತಾಯವಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಆರ್‌ಸಿಎಚ್ ಅಧಿಕಾರಿ ಡಾ.ನಟರಾಜ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಂಕರ ರಾವ್, ತಾಲೂಕು ವೈದ್ಯಾಧಿಕಾರಿ ಡಾ.ಸೂರಜ ನಾಯಕ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕನವರ, ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top